Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:25 - ಕನ್ನಡ ಸಮಕಾಲಿಕ ಅನುವಾದ

25 ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:25
17 ತಿಳಿವುಗಳ ಹೋಲಿಕೆ  

ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.


ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು