Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:26 - ಕನ್ನಡ ಸಮಕಾಲಿಕ ಅನುವಾದ

26 ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:26
21 ತಿಳಿವುಗಳ ಹೋಲಿಕೆ  

ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನನ್ನೂ, ಜೇಬನನ್ನೂ ಹಿಡಿದು, ಓರೇಬನನ್ನು ಓರೇಬೆಂಬ ಬಂಡೆಯಲ್ಲಿಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ, ಮಿದ್ಯಾನ್ಯರನ್ನು ಹಿಂದಟ್ಟಿ, ಓರೇಬ್, ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.


ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.


ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.


ಯೆಹೋವ ದೇವರು ದಂಡದಿಂದ ದಂಡಿಸುವಾಗ, ಅಸ್ಸೀರಿಯವು ಆತನ ಧ್ವನಿಯಿಂದಲೇ ಮುರಿದು ಹೋಗುವುದು.


ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು