Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:27 - ಕನ್ನಡ ಸಮಕಾಲಿಕ ಅನುವಾದ

27 ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ಕತ್ತಿನಿಂದಲೂ ತೊಲಗುವವು; ನೀವು ಪುಷ್ಟರಾದ ಕಾರಣ ನೊಗವು ಮುರಿದು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:27
28 ತಿಳಿವುಗಳ ಹೋಲಿಕೆ  

ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


“ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.


ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,


“ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.


“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು