Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:29 - ಕನ್ನಡ ಸಮಕಾಲಿಕ ಅನುವಾದ

29 ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:29
18 ತಿಳಿವುಗಳ ಹೋಲಿಕೆ  

ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು.


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.


ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ


ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.


ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು.


ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು.


ಯೋನಾತಾನನು ಫಿಲಿಷ್ಟಿಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೊಚೇಚ್, ಸೆನೆ ಎಂಬ ಚೂಪಾದ ಎರಡು ಬಂಡೆಗಳಿದ್ದವು.


ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.


ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.


ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು.


ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ, ಮತ್ತೊಂದು ದಕ್ಷಿಣಕ್ಕೆ ಗಿಬೆಯಕ್ಕೆ ಎದುರಾಗಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು