Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:11 - ಕನ್ನಡ ಸಮಕಾಲಿಕ ಅನುವಾದ

11 ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:11
69 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ ಯೂಫ್ರೇಟೀಸ್ ನದಿಯವರೆಗೂ ಸಮುದ್ರದಿಂದ ಸಮುದ್ರದವರೆಗೂ ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು.


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.


ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು.


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.


ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?


ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.


ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.


ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಅವರು ಯೆಹೋವ ದೇವರಿಗೆ ಮಹಿಮೆಯನ್ನು ಸಲ್ಲಿಸಲಿ! ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.


ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.


ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.


ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:


ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.


ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.


ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.


“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು