Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:12 - ಕನ್ನಡ ಸಮಕಾಲಿಕ ಅನುವಾದ

12 ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:12
33 ತಿಳಿವುಗಳ ಹೋಲಿಕೆ  

ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.


ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.


ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.


ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.


ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.


“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು