Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:14
30 ತಿಳಿವುಗಳ ಹೋಲಿಕೆ  

ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.


ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”


ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಅವನು ಹದ್ದಿನ ಹಾಗೆ ಹಾರಿ, ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು.


ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು