Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:2 - ಕನ್ನಡ ಸಮಕಾಲಿಕ ಅನುವಾದ

2 ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:2
27 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


“ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು