Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:6 - ಕನ್ನಡ ಸಮಕಾಲಿಕ ಅನುವಾದ

6 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಸಮಯದಲ್ಲಿ ತೋಳಗಳು ಕುರಿಮರಿಯೊಂದಿಗೆ ಸಮಾಧಾನದಿಂದ ಒಟ್ಟಾಗಿ ವಾಸಿಸುವವು. ಚಿರತೆಯು ಆಡಿನ ಮರಿಗಳೊಂದಿಗೆ ಮಲಗಿಕೊಳ್ಳುವದು. ಕರುಗಳು, ಪ್ರಾಯದ ಸಿಂಹಗಳು, ಹೋರಿಗಳು ಒಟ್ಟಾಗಿ ಸಮಾಧಾನದಿಂದ ಜೀವಿಸುವವು. ಒಂದು ಚಿಕ್ಕಮಗು ಅವುಗಳನ್ನು ನಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:6
15 ತಿಳಿವುಗಳ ಹೋಲಿಕೆ  

ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು