Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:8 - ಕನ್ನಡ ಸಮಕಾಲಿಕ ಅನುವಾದ

8 ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊಲೆಕೂಸು ನಾಗರಹುತ್ತದ ಮೇಲೆ ಆಡುವದು; ಮೊಲೆಬಿಟ್ಟ ಮಗು ಹಾವಿನ ಬಿಲದ ಮೇಲೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:8
7 ತಿಳಿವುಗಳ ಹೋಲಿಕೆ  

ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.


ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.


ಕೊನೆಗೆ ಅದು ಹಾವಿನಂತೆ ಕಚ್ಚುವುದು ಮತ್ತು ಸರ್ಪದಂತೆ ವಿಷವುಕ್ಕಿಸುವುದು.


ಹಸುವು ಕರಡಿಯ ಸಂಗಡ ಮೇಯುವುವು; ಅವುಗಳ ಮರಿಗಳು ಜೊತೆಯಾಗಿ ಮಲಗುವುವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು