ಯೆಶಾಯ 12:6 - ಕನ್ನಡ ಸಮಕಾಲಿಕ ಅನುವಾದ6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.