ಯೆಶಾಯ 13:11 - ಕನ್ನಡ ಸಮಕಾಲಿಕ ಅನುವಾದ11 ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು. ಅಧ್ಯಾಯವನ್ನು ನೋಡಿ |