Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:19 - ಕನ್ನಡ ಸಮಕಾಲಿಕ ಅನುವಾದ

19 ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:19
23 ತಿಳಿವುಗಳ ಹೋಲಿಕೆ  

ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಶೇಷಕ್ ಹೇಗೆ ಶತ್ರುವಶವಾಗಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬಿಲೋನ್ ಜನಾಂಗಗಳೊಳಗೆ ಹೇಗೆ ಎಷ್ಟು ನಿರ್ಜನವಾಯಿತು!


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.


“ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.


ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’


ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.


“ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು.


“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.


ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು. ನೀನು ಎಂದೆಂದಿಗೂ ಹಾಳಾಗುವೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು