ಯೆಶಾಯ 13:3 - ಕನ್ನಡ ಸಮಕಾಲಿಕ ಅನುವಾದ3 ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಆರಿಸಿಕೊಂಡವರಿಗೆ ಅಪ್ಪಣೆಮಾಡಿದ್ದೇನೆ. ಹೌದು, ಉತ್ಸಾಹದಿಂದ ಮೆರೆಯುವ ಆ ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರನ್ನು ಕರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ಅಧ್ಯಾಯವನ್ನು ನೋಡಿ |