Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:13 - ಕನ್ನಡ ಸಮಕಾಲಿಕ ಅನುವಾದ

13 ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ, “ನಾನು ಆಕಾಶಕ್ಕೆ ಏರಿ, ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು. ಉತ್ತರ ದಿಕ್ಕಿನ ಕಡೆಗಿರುವ ಜಫೋನ್ ಪರ್ವತದ ಮೇಲೆಯೂ ನಾನು ಆಸೀನನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:13
23 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, “ ‘ಟೈರ್ ನಗರಿಯೇ, “ನಾನು ಪೂರ್ಣ ಸೌಂದರ್ಯವತಿ,” ಎಂದು ನೀನು ಅಂದುಕೊಂಡಿದ್ದೀಯಲ್ಲಾ!


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.


ಹೆಮ್ಮೆಯು ಆಕಾಶಕ್ಕೆ ಏರಿದರೂ, ಅವನ ತಲೆ ಮೇಘಕ್ಕೆ ಮುಟ್ಟಿದರೂ,


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು