Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:15
13 ತಿಳಿವುಗಳ ಹೋಲಿಕೆ  

ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.


ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ,


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು