Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:2 - ಕನ್ನಡ ಸಮಕಾಲಿಕ ಅನುವಾದ

2 ದೇಶಗಳು ಇನ್ನೊಮ್ಮೆ ಅವರನ್ನು ತೆಗೆದುಕೊಂಡು ಅವನ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಯೆಹೋವ ದೇವರ ದೇಶದಲ್ಲಿ, ಆ ಜನಾಂಗದವರನ್ನು ಗಂಡು ಹೆಣ್ಣುಗಳನ್ನಾಗಿ ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದವರನ್ನು ಸೆರೆಹಿಡಿಯುವರು. ತಮ್ಮನ್ನು ದಬ್ಬಾಳಿಕೆಗಾರರ ಮೇಲೆ ಅಧಿಕಾರ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:2
34 ತಿಳಿವುಗಳ ಹೋಲಿಕೆ  

ಪರನಾಡಿನವರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು. ಇತರರು ನಿಮಗೆ ನೇಗಿಲು ಹೂಡುವವರೂ, ದ್ರಾಕ್ಷಿತೋಟ ಕಾಯುವವರೂ ಆಗಿರುವರು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಅವರು ಅದನ್ನು ಮಾಡಲು ಇಷ್ಟಪಟ್ಟದ್ದಲ್ಲದೆ, ಅದು ಕರ್ತವ್ಯವೂ ಆಗಿದೆ. ಹೌದು, ಯೆಹೂದ್ಯರಲ್ಲದವರು ಯೆಹೂದ್ಯರ ಆತ್ಮಿಕ ಆಶೀರ್ವಾದಗಳಲ್ಲಿ ಪಾಲುಗೊಂಡಿರುವುದಾದರೆ ತಮ್ಮ ಲೌಕಿಕ ವಿಷಯಗಳಲ್ಲಿ ಅವರೊಂದಿಗೆ ಹಂಚಿಕೊಳ್ಳುವುದು ಅವರ ಕರ್ತವ್ಯವಾಗಿದೆ.


ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.


ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.


ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.


“ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.


ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು