Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:22 - ಕನ್ನಡ ಸಮಕಾಲಿಕ ಅನುವಾದ

22 “ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು : “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೇನಾಧೀಶ್ವರನಾದ ಯೆಹೋವನಿಂದ ಒಂದು ಮಾತು ಹೊರಟಿತು - ನಾನು ಅವರಿಗೆ ವಿರುದ್ಧವಾಗಿ ಎದ್ದು ಬಾಬೆಲಿನಿಂದ ಹೆಸರನ್ನೂ ಜನಶೇಷವನ್ನೂ ಪುತ್ರ ಪೌತ್ರರನ್ನೂ ಕತ್ತರಿಸಿಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:22
15 ತಿಳಿವುಗಳ ಹೋಲಿಕೆ  

ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.


ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು