ಯೆಶಾಯ 14:23 - ಕನ್ನಡ ಸಮಕಾಲಿಕ ಅನುವಾದ23 “ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |