Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:24 - ಕನ್ನಡ ಸಮಕಾಲಿಕ ಅನುವಾದ

24 ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:24
30 ತಿಳಿವುಗಳ ಹೋಲಿಕೆ  

ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ.


ಅನಂತರ ಮೋಶೆ, “ಯೆಹೋವ ದೇವರ ಸಿಂಹಾಸನಕ್ಕೆ ವಿರೋಧವಾಗಿ ಅಮಾಲೇಕ್ಯರ ಕೈಗಳು ಎತ್ತಿದ್ದರಿಂದ, ಯೆಹೋವ ದೇವರು ತಲತಲಾಂತರಗಳಲ್ಲಿ ಅಮಾಲೇಕ್ಯರ ವಿರುದ್ಧ ಯುದ್ಧಮಾಡುವರು,” ಎಂದನು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ.


ಈಜಿಪ್ಟ್ ಬೆಚ್ಚಿ ಬೀಳುವುದಕ್ಕೆ ಯೆಹೂದ ದೇಶವು ಕಾರಣವಾಗುವುದು, ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನು ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿಗೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆಯನ್ನು ತಿಳಿದು ಬೆರಗಾಗುವನು.


ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ, ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.


ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು