Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:28 - ಕನ್ನಡ ಸಮಕಾಲಿಕ ಅನುವಾದ

28 ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೈವೋಕ್ತಿ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನಾದ ಆಹಾಜನು ಕಾಲವಾದ ವರುಷದಲ್ಲಿ ಈ ದೈವೋಕ್ತಿಯು ಕೇಳ ಬಂತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:28
7 ತಿಳಿವುಗಳ ಹೋಲಿಕೆ  

ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.


ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು