ಯೆಶಾಯ 15:1 - ಕನ್ನಡ ಸಮಕಾಲಿಕ ಅನುವಾದ1 ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು. ಅಧ್ಯಾಯವನ್ನು ನೋಡಿ |