Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:4 - ಕನ್ನಡ ಸಮಕಾಲಿಕ ಅನುವಾದ

4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:4
19 ತಿಳಿವುಗಳ ಹೋಲಿಕೆ  

“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, ಯಹಚಿನವರೆಗೂ, ಚೋಗರ್ ಮೊದಲ್ಗೊಂಡು ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು.


ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?


ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.


ಯಹಚ, ಕೆದೇಮೋತ್, ಮೇಫಾತ್,


ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.


ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.


“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.


ಇದಲ್ಲದೆ ಬಯಲುಸೀಮೆಯ ಮೇಲೆ ನ್ಯಾಯ ತೀರ್ವಿಕೆ ಬಂತು; ಹೋಲೋನ್, ಯಹಚ, ಮೇಫಾತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು