Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:9 - ಕನ್ನಡ ಸಮಕಾಲಿಕ ಅನುವಾದ

9 ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು. ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು. ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹರಿಯುತಿದೆ ದೀಮೋನಿನ ನದಿ ರಕ್ತಮಯವಾಗಿ, ಕಾದಿದೆ ದೀಮೋನರಿಗೆ ಇನ್ನೂ ಹೆಚ್ಚಿನ ಹಾನಿ, ಎರಗಲಿದೆ ಅಳಿದುಳಿದ ಮೋವಾಬ್ಯರ ಮೇಲೆ ಒಂದು ಕೇಸರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೀಮೋನಿನ ನೀರೆಲ್ಲಾ ರಕ್ತಮಯವಾಯಿತು; ಮತ್ತು ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು, ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:9
11 ತಿಳಿವುಗಳ ಹೋಲಿಕೆ  

ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.


“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.


ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.


“ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು