Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:1 - ಕನ್ನಡ ಸಮಕಾಲಿಕ ಅನುವಾದ

1 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು ಸೆಲ ಬಂಡೆಯಿಂದ ಮರುಭೂಮಿಯ ಕಡೆಗೆ, ಚೀಯೋನ್ ಪುತ್ರಿಯರ ಪರ್ವತಕ್ಕೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇಶವನ್ನಾಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರಿಯ ಪರ್ವತಕ್ಕೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:1
8 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ಮೋವಾಬಿನ ಅರಸನಾದ ಮೇಷನು ಕುರಿ ಮಂದೆಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ, ಒಂದು ಲಕ್ಷ ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಡುತ್ತಿದ್ದನು.


ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.


ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.


ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”


ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು