Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:10 - ಕನ್ನಡ ಸಮಕಾಲಿಕ ಅನುವಾದ

10 ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹರ್ಷಾನಂದಗಳು ತೋಟಗಳಿಂದ ತೊಲಗಿವೆ, ದ್ರಾಕ್ಷೆಯ ತೋಟಗಳಲ್ಲಿ ಉತ್ಸಾಹಧ್ವನಿಯೂ ಉಲ್ಲಾಸದ ಆರ್ಭಟವೂ ಇರುವದಿಲ್ಲ, ತುಳಿಯುವವರು ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ, ಅವರ ಕೂಗನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:10
13 ತಿಳಿವುಗಳ ಹೋಲಿಕೆ  

ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.


ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”


ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.


ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.


ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು