Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈಗ ಯೆಹೋವನು ಹೇಳುವದೇನಂದರೆ - ಆಳಿನ ಒಂದೊಂದು ವರುಷ ವಾಯಿದೆಗೆ ಸರಿಯಾದ ಮೂರು ವರುಷಕ್ಕೇ ಮೋವಾಬಿನ ಮಹಿಮೆಯೂ ಅಲ್ಲಿನವರ ದೊಡ್ಡ ಗುಂಪೂ ಹೀನಾಯಕ್ಕೆ ಈಡಾಗುವವು; ಉಳಿದ ಜನವು ಹೆಚ್ಚದೆ ಕೇವಲ ಸ್ವಲ್ಪವಾಗಿಯೇ ಇರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:14
18 ತಿಳಿವುಗಳ ಹೋಲಿಕೆ  

ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.


ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.


ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು.


ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.


“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?


ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.


ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಯೆಹೋವ ದೇವರು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ:


ಈಜುವವನು ಈಜುವುದಕ್ಕೆ ಕೈಗಳನ್ನು ಹರಡಿಕೊಂಡ ಹಾಗೆ, ಅವರು ತಮ್ಮ ಕೈಗಳನ್ನು ಚಾಚುವರು. ಆದರೆ ದೇವರು ಅವರ ಗರ್ವವನ್ನೂ ಅವರ ಕೈ ಕೆಲಸವನ್ನೂ ತಗ್ಗಿಸಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು