ಯೆಶಾಯ 16:4 - ಕನ್ನಡ ಸಮಕಾಲಿಕ ಅನುವಾದ4 ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, ನಾಶನವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ, ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತುಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲಾತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಡಿ ಹಿಂಸಿಸುವವರು [ನಿಮ್ಮ] ದೇಶದಿಂದ ನಿರ್ಮೂಲರಾದರು, ಬಲಾತ್ಕಾರವು ತೀರಿತು, ತುಳಿದುಬಿಡುವವರು ಮುಗಿದುಹೋದರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು. ಅಧ್ಯಾಯವನ್ನು ನೋಡಿ |