ಯೆಶಾಯ 17:14 - ಕನ್ನಡ ಸಮಕಾಲಿಕ ಅನುವಾದ14 ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು. ಅಧ್ಯಾಯವನ್ನು ನೋಡಿ |