ಯೆಶಾಯ 17:6 - ಕನ್ನಡ ಸಮಕಾಲಿಕ ಅನುವಾದ6 ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೂ ಎಣ್ಣೆಯ ಮರವನ್ನು ಬಡಿದ ಬಳಿಕ ಮೇಲಿನ ಕೊಂಬೆಯ ಕೊಟ್ಟಕೊನೆಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ರೆಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು, ನಿಂತಿರುವಂತೆ ಹಕ್ಕಲು ಅದರಲ್ಲಿ ಉಳಿದಿರುವದು ಎಂದು ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿ |