Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:8 - ಕನ್ನಡ ಸಮಕಾಲಿಕ ಅನುವಾದ

8 ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳುದೇವರುಗಳಿಗೆ, ತಾವು ಮಾಡಿದ ಬಲಿಪೀಠಗಳಿಗೆ, ಪೂಜಾಸ್ಥಳಗಳಿಗೆ ಅವರು ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:8
29 ತಿಳಿವುಗಳ ಹೋಲಿಕೆ  

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು.


“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,


ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.


ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.


ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು