Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:3 - ಕನ್ನಡ ಸಮಕಾಲಿಕ ಅನುವಾದ

3 ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:3
20 ತಿಳಿವುಗಳ ಹೋಲಿಕೆ  

ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.


ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”


ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.


ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.


ಓ ದೇಶವೇ, ದೇಶವೇ, ದೇಶವೇ, ಯೆಹೋವ ದೇವರ ವಾಕ್ಯವನ್ನು ಕೇಳು.


ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.


ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.


ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.


ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು