Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ನನಗೆ ಹೇಳಿರುವದೇನಂದರೆ, ಬಿಸಿಲಿನಲ್ಲಿ ಜಳಜಳಿಸುವ ದಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:4
17 ತಿಳಿವುಗಳ ಹೋಲಿಕೆ  

ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು