Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೊಯ್ಲಿನ ಕಾಲಕ್ಕೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಿಂದಾದ ಹೀಚು ದೋರೆಗಾಯಿಯಾಗುತ್ತಿರುವಾಗ ಆತನು ಕುಡುಗೋಲುಗಳಿಂದ ಕುಡಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:5
6 ತಿಳಿವುಗಳ ಹೋಲಿಕೆ  

ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”


ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ. ನಮ್ಮ ದ್ರಾಕ್ಷಿತೋಟಗಳಲ್ಲಿ ಹೂಗಳು ಅರಳಿವೆ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಇಗೋ, ಕರ್ತದೇವರು ಆಗಿರುವ ಸೇನಾಧೀಶ್ವರ ಯೆಹೋವ ದೇವರು ಭಯಂಕರವಾಗಿ ಕೊಂಬೆಯನ್ನು ಕತ್ತರಿಸುವರು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವುವು, ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು