Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:1 - ಕನ್ನಡ ಸಮಕಾಲಿಕ ಅನುವಾದ

1 ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:1
36 ತಿಳಿವುಗಳ ಹೋಲಿಕೆ  

“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.


ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.


ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.


ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.


ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.


ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.


ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.


ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು