Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:10 - ಕನ್ನಡ ಸಮಕಾಲಿಕ ಅನುವಾದ

10 ಬಟ್ಟೆಯಲ್ಲಿ ಕೆಲಸ ಮಾಡುವವರು ಖಿನ್ನರಾಗುತ್ತಾರೆ, ಮತ್ತು ಎಲ್ಲಾ ವೇತನದಾರರು ಹೃದಯದಲ್ಲಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾಡಿನ ಜವಳಿ ವ್ಯಾಪಾರಿಗಳು, ಕೂಲಿಯಾಳುಗಳು ಚಿಂತಾಕ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇಶದ ಆಧಾರಭೂತರು ಮುರಿದುಹೋಗುವರು, ಕೂಲಿಯವರು ಮನಮರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:10
5 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಹಿಡಿದುಕೊಂಡು ನದಿ, ಕಾಲುವೆ, ಕೆರೆಗಳ ಮೇಲೆಲ್ಲಾ ನಿನ್ನ ಕೈಚಾಚಿ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಬರುವಂತೆ ಮಾಡು,’ ಎಂದು ಹೇಳಬೇಕು,” ಎಂದರು.


ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.


ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.


ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು