ಯೆಶಾಯ 19:19 - ಕನ್ನಡ ಸಮಕಾಲಿಕ ಅನುವಾದ19 ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು. ಅಧ್ಯಾಯವನ್ನು ನೋಡಿ |
ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.