Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:2 - ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:2
20 ತಿಳಿವುಗಳ ಹೋಲಿಕೆ  

ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.


ಆಗ ಸೌಲನೂ, ಅವನ ಸಂಗಡ ಯುದ್ಧಕ್ಕಿದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ, ಫಿಲಿಷ್ಟಿಯರಲ್ಲಿ ಗಲಿಬಿಲಿಯುಂಟಾಗಿ ಒಬ್ಬನ ಖಡ್ಗವು ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನನ್ನು ಕೊಂದುಹಾಕುತ್ತಿದ್ದರು.


ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.’


ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.


ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.


ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”


ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, ಒಂದು ವರ್ಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. ದೇಶದಲ್ಲಿ ಬಲಾತ್ಕಾರವಿರುವುದು, ಆಳುವವನು ಆಳುವವನಿಗೆ ವಿರೋಧವಾಗಿರುವನು.


ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.


ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು