Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:21 - ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:21
30 ತಿಳಿವುಗಳ ಹೋಲಿಕೆ  

ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.


ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.


ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.


ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಭೂಮಿಯ ರಾಜ್ಯಗಳೇ, ದೇವರಿಗೆ ಹಾಡಿರಿ. ಯೆಹೋವ ದೇವರನ್ನು ಕೀರ್ತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು