Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:23 - ಕನ್ನಡ ಸಮಕಾಲಿಕ ಅನುವಾದ

23 ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:23
15 ತಿಳಿವುಗಳ ಹೋಲಿಕೆ  

ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಆ ದಿನದಲ್ಲಿ ಇಸ್ರಾಯೇಲು ಈಜಿಪ್ಟಿನವರ ಮತ್ತು ಅಸ್ಸೀರಿಯದವರ ಸಂಗಡ ಮೂರನೆಯದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವುದು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ದಿವಸದಲ್ಲಿ ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ ಯೂಫ್ರೇಟೀಸ್ ನದಿಯವರೆಗೂ ಸಮುದ್ರದಿಂದ ಸಮುದ್ರದವರೆಗೂ ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು