Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:25 - ಕನ್ನಡ ಸಮಕಾಲಿಕ ಅನುವಾದ

25 ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಸೃಷ್ಟಿಯಾದ ಅಶ್ಶೂರಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇಲಿಗೂ ಶುಭವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆಶೀರ್ವದಿಸುವನು. ಆತನು, “ಈಜಿಪ್ಟೇ, ನೀನು ನನ್ನವನು; ಅಶ್ಶೂರವೇ, ನಾನು ನಿನ್ನನ್ನು ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ತ್ಯ. ನೀವೆಲ್ಲರೂ ಆಶೀರ್ವದಿಸಲ್ಪಟ್ಟವರು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:25
30 ತಿಳಿವುಗಳ ಹೋಲಿಕೆ  

ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.


ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ ನೀವು ಆಶೀರ್ವಾದ ಹೊಂದಿದವರು.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


“ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”


“ ‘ “ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, ನಿಮ್ಮನ್ನು ಕಾಪಾಡಲಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.


ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ.


ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.


ಆ ದಿನದಲ್ಲಿ ಇಸ್ರಾಯೇಲು ಈಜಿಪ್ಟಿನವರ ಮತ್ತು ಅಸ್ಸೀರಿಯದವರ ಸಂಗಡ ಮೂರನೆಯದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವುದು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು