Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:5 - ಕನ್ನಡ ಸಮಕಾಲಿಕ ಅನುವಾದ

5 ನೈಲ್ ನದಿಯ ನೀರು ಬತ್ತಿಹೋಗುವುದು. ನದಿ ತೀರವೂ ಇಂಗಿ ಒಣಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮಹಾನದಿಯ ನೀರು ಬತ್ತಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೈಲ್ ನದಿಯು ಬತ್ತಿಹೋಗುವದು. ಪ್ರವಾಹದ ನೀರು ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:5
9 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.


ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.


ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.


ಸರೋವರದ ನೀರು ಒಣಗಿ ಹೋಗುವಂತೆಯೂ, ಬರಗಾಲದಲ್ಲಿ ನದಿಗಳು ಬತ್ತಿಹೋಗುವಂತೆಯೂ,


ನಿಮ್ರೀಮ್ ಹೊಳೆಯು ಬತ್ತಿಹೋಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು ಅಲ್ಲಿ ಹಸಿರಾದದ್ದು ಇಲ್ಲ.


ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು