Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:16 - ಕನ್ನಡ ಸಮಕಾಲಿಕ ಅನುವಾದ

16 ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:16
13 ತಿಳಿವುಗಳ ಹೋಲಿಕೆ  

ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


“ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.


ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯಸ್ಥಾನವು ಹಾಳಾಯಿತು, ಎಂದು ಆತನು ಹೇಳಿದ್ದಾನೆ.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


“ ‘ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು