ಯೆಶಾಯ 2:19 - ಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು. ಅಧ್ಯಾಯವನ್ನು ನೋಡಿ |