Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:2 - ಕನ್ನಡ ಸಮಕಾಲಿಕ ಅನುವಾದ

2 ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ - ಏಳು, ಸೊಂಟದಿಂದ ಗೋಣಿತಟ್ಟನ್ನು ಬಿಚ್ಚು, ಕಾಲಿನಿಂದ ಕೆರವನ್ನು ಕಳಚು ಎಂದು ಇತರರಿಗೆ ಸೂಚನೆಯಾಗಿ ಅಪ್ಪಣೆಕೊಟ್ಟನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರುಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:2
27 ತಿಳಿವುಗಳ ಹೋಲಿಕೆ  

ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.


ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು.


“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.


ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”


ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.


ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರ ತೊಂಬತ್ತು ದಿವಸಗಳಾಗಿವೆ. ಹೀಗೆ ನೀನು ಇಸ್ರಾಯೇಲಿನ ಜನರ ಅಕ್ರಮಗಳನ್ನು ಹೊರಬೇಕು.


ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.


ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.


ಅದಕ್ಕೆ ಯೆಹೋವ ದೇವರ ಸೈನ್ಯದ ಅಧಿಪತಿಯು ಯೆಹೋಶುವನಿಗೆ, “ನಿನ್ನ ಕೆರಗಳನ್ನು ನಿನ್ನ ಕಾಲುಗಳಿಂದ ತೆಗೆದಿಡು. ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು,” ಎಂದನು. ಹಾಗೆಯೇ ಯೆಹೋಶುವನು ಮಾಡಿದನು.


ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.


“ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು