Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:4 - ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:4
18 ತಿಳಿವುಗಳ ಹೋಲಿಕೆ  

ಈಜಿಪ್ಟಿನವರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನಾಳುವನು, ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, ನಿನ್ನ ಮುಖದ ಮೇಲೆ ಎತ್ತುವೆನು.


ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಬೆತ್ತಲೆತನವು ಮರೆಮಾಡದೇ ಇದ್ದುದರಿಂದ ನೀನು ನಾಚಿಕೆಗೆ ಈಡಾಗುವೆ. ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.


ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”


ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.


ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.


ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.


“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.


ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.


ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.


ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು