Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:12 - ಕನ್ನಡ ಸಮಕಾಲಿಕ ಅನುವಾದ

12 ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:12
16 ತಿಳಿವುಗಳ ಹೋಲಿಕೆ  

ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”


ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು