Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:9 - ಕನ್ನಡ ಸಮಕಾಲಿಕ ಅನುವಾದ

9 ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:9
22 ತಿಳಿವುಗಳ ಹೋಲಿಕೆ  

ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.


ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು.


ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.


ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥ ಸಾಲುಗಳನ್ನು ನೋಡಿದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ.”


ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.


“ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು