ಯೆಶಾಯ 22:12 - ಕನ್ನಡ ಸಮಕಾಲಿಕ ಅನುವಾದ12 ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು. ಅಧ್ಯಾಯವನ್ನು ನೋಡಿ |