ಯೆಶಾಯ 22:14 - ಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು. ಅಧ್ಯಾಯವನ್ನು ನೋಡಿ |